ಕಲಬುರಗಿ: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ ನಗರದಲ್ಲಿ ಮಠಾಧೀಶರು ಪ್ರತಿಭಟನೆ ನಡೆಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಡಿಸಿ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾಗಿದ್ದಾರೆ.
ಅಲ್ಲದೆ ಅತ್ಯಾಚಾರಿಗೆ ಕಠಿಣ ಶಿಕ್ಷೆ ನೀಡಿ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಮಠಾಧೀಶರು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಮೂಲಕ ಸಿಎಂ ಬಿಎಸ್ವೈಗೆ ಮನವಿ ಪತ್ರ ಸಲ್ಲಿಸಿದ ಮಠಾಧೀಶರು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಈ ಘಟನೆ ಬೆನ್ನಲ್ಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರತಿಭಟನೆ ನಡೆದಿದೆ.