ಕಲಬುರಗಿ: ವೀರಶೈವ, ಲಿಂಗಾಯತ ಸಮುದಾಯದ ಎಲ್ಲಾ ಉಪ ಜಾತಿಗಳಿಗೂ ಮೀಸಲಾತಿ ನೀಡುವಂತೆ ವೀರಶೈವ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.
ನಗರದಲ್ಲಿ ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ ಪಾಟೀಲ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು, ವೀರಶೈವ, ಲಿಂಗಾಯತ ಎಲ್ಲಾ ಉಪ ಜಾತಿಗಳಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿದರು. ವೀರಶೈವ, ಲಿಂಗಾಯತ ಸಮುದಾಯದಲ್ಲಿಯೂ ಬಡವರಿದ್ದಾರೆ ಅವರಿಗೂ ಮೀಸಲಾತಿಯ ಅವಶ್ಯಕತೆಯಿದೆ. ಹೀಗಾಗಿಯೇ ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ.
ಫೆಬ್ರವರಿ 21ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಕಲಬುರಗಿಯಿಂದ 1 ಸಾವಿರ ಪ್ರತಿನಿಧಿಗಳು ಹಾಗೂ ವಿವಿಧ ಮಠಾಧೀಶರು, ಜನಪ್ರತಿಧಿಗಳೂ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.