ಕಲಬುರಗಿ: ಮೈ ಭೀ ಚೌಕಿದಾರ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಕಲಬುರ್ಗಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಿಂದ ಆರಂಭಗೊಂಡ ಪಾದಯಾತ್ರೆ ಜಗತ್ ವೃತ್ತದವರೆಗೆ ನಡೆಯಿತು. ಮೈ ಭೀ ಚೌಕಿದಾರ್ ಹಾಗೂ ಚೌಕಿದಾರ್ ಶೇರ್ ಹೈ, ಕಾಂಗ್ರೆಸ್ ಚೋರ್ ಹೈ ಎಂದು ಪ್ರಧಾನಿ ಮೋದಿ ಪರ ಘೋಷಣೆ ಕೂಗುವ ಮೂಲಕ ಮೋದಿ ಅವರನ್ನು ಬೆಂಬಲಿಸುವಂತೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಜನತೆಯಲ್ಲಿ ಮನವಿ ಮಾಡಿಕೊಂಡರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ , ಮಾಜಿ ಶಾಸಕ ಮಾಲಿಕಯ್ಯಾ ಗುತ್ತೆದಾರ, ಸುಭಾಷ್ ಗುತ್ತೆದಾರ ಅನೇಕರು ಅಭಿಯಾನದಲ್ಲಿ ಭಾಗಿಯಾಗಿದ್ದರು.