ಕಲಬುರಗಿ : ಕೋವಿಡ್ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ, ಈ ವರ್ಷ ಪ್ರೋತ್ಸಾಹ ಧನ ಕೊಡಲಾಗುತ್ತಿಲ್ಲ. ಸದ್ಯ ಕೇಂದ್ರ ಸರ್ಕಾರದ ಬೆಂಬಲ ಬೆಲೆಯೊಂದಿಗೆ ತೊಗರಿ ಖರೀದಿ ಮಾಡುತ್ತಿದ್ದೇವೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ತೊಗರಿಗೆ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದರು. ಕೋವಿಡ್ ಕಾರಣದಿಂದಾಗಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ.
ಹೀಗಾಗಿ, ಎಲ್ಲಾ ಕ್ಷೇತ್ರದ ಅನುದಾನ ಕಡಿತಗೊಳಿಸಲಾಗಿದೆ. ಆದ ಕಾರಣ ಈ ವರ್ಷ ಪ್ರೋತ್ಸಾಹ ಧನ ಕೊಡಲಾಗುತ್ತಿಲ್ಲ. ಸದ್ಯ ಕೇಂದ್ರ ಸರ್ಕಾರದ ಬೆಂಬಲ ಬೆಲೆಯೊಂದಿಗೆ ತೊಗರಿ ಖರೀದಿ ಮಾಡಲಾಗುತ್ತಿದೆ.
ಓದಿ: ಯತ್ನಾಳ್ ರಾಜೀನಾಮೆ ನೀಡಿ ಅಂದಿದ್ದಾರೆ, ಉಳಿದವರು ಏನಂತಾರೆ ನೋಡೋಣ: ಬಿ.ಸಿ. ಪಾಟೀಲ
ಅತಿವೃಷ್ಟಿಯಿಂದಾಗಿ ಕಲಬುರಗಿ ಜಿಲ್ಲೆಯ 4.42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಈವರೆಗೆ 1,39,158 ರೈತರಿಗೆ 97.07 ಕೋಟಿ ರೂ. ಪರಿಹಾರ ಆರು ಹಂತಗಳಲ್ಲಿ ವಿತರಣೆ ಮಾಡಲಾಗಿದೆ.
ತಾಂತ್ರಿಕ ತೊಂದರೆಯಿಂದಾಗಿ ಕೆಲ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಿಸಲಾಗಿಲ್ಲ. ಸಮಸ್ಯೆ ಸರಿಪಡಿಸಿ ಉಳಿದವರಿಗೂ ಶೀಘ್ರವೇ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.