ಕಲಬುರಗಿ: ರಿಂಗ್ ರಸ್ತೆಯ ಮಿರ್ಚಿ ಗೋದಾಮಿನ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಘವೇಂದ್ರ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮಹ್ಮದ್ ಅಜರ್ ಹಾಗೂ ಸೈಯದ್ ಸಾಜೀದ್ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 02 ರಂದು ಶಫೀಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕರ ಜಾಡು ಹಿಡಿದ ಪೊಲೀಸರು ಕೊನೆಗೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ. ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಡಿಸಿಪಿ ಕಿಶೋರ್ ಬಾಬು ಮಾಹಿತಿ ನೀಡಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.