ಕಲಬುರಗಿ : ಪತಿ ಮತ್ತು ಮಗನಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಭಯಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಅಪ್ಪಾಕೆರೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿ ಇಂದುಮತಿ (56) ಆತ್ಮಹತ್ಯೆಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಮತ್ತು ಮಗನಿಗೆ ಸೋಂಕು ದೃಢವಾಗಿದ್ದು, ಇಬ್ಬರು ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪತಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದರಿಂದ ಭಯಗೊಂಡು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.