ETV Bharat / state

ಕಲಬುರಗಿ: ಅನುಮಾನಾಸ್ಪದ ರೀತಿಯಲ್ಲಿ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​​​​​​ ಸಾವು - ಅನುಮಾನಾಸ್ಪದ ರೀತಿಯಲ್ಲಿ ಮಹಿಳಾ ಪೊಲೀಸ್ ಕಾನ್​ಸ್ಟೇಬಲ್ ಸಾವು

ಮಹಿಳಾ ಪೊಲೀಸ್ ಕಾನ್ಸ್​​​​ಟೇಬಲ್​ವೊಬ್ಬರು ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಯಡ್ರಾಮಿ ತಾಲೂಕಿನ ಸುಂಬಡ್ ಗ್ರಾಮದಲ್ಲಿ ನಡೆದಿದೆ.

Woman Police Constable Died
ಅನುಮಾನಾಸ್ಪದ ರೀತಿಯಲ್ಲಿ ಮಹಿಳಾ ಪೊಲೀಸ್ ಕಾನ್​ಸ್ಟೇಬಲ್ ಸಾವು
author img

By

Published : Aug 31, 2020, 10:00 AM IST

ಕಲಬುರಗಿ: ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು ಬಾವಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಯಡ್ರಾಮಿ ತಾಲೂಕಿನ ಸುಂಬಡ್ ಗ್ರಾಮದಲ್ಲಿ ನಡೆದಿದೆ.

ಅನುಮಾನಾಸ್ಪದ ರೀತಿಯಲ್ಲಿ ಮಹಿಳಾ ಪೊಲೀಸ್ ಕಾನ್ಸ್​​ಟೇಬಲ್​​ ಸಾವು

ಸುರೇಖಾ ಬಿರಾದಾರ (34) ಮೃತ ಮಹಿಳಾ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. 2008ರಲ್ಲಿ ಪೊಲೀಸ್ ಸೇವೆಗೆ ಆಯ್ಕೆಯಾದ ಸುರೇಖಾ 2010ರಲ್ಲಿ ಪೊಲೀಸ್ ಕಾನ್ಸ್​ಟೇಬಲ್​​ ಮಲ್ಲಿನಾಥ ಅವರನ್ನು ಮದುವೆಯಾಗಿದ್ದರು. ಇವರಿಗೆ 5 ವರ್ಷದ ಗಂಡು ಮಗು ಹಾಗೂ 4 ವರ್ಷದ ಹೆಣ್ಣು ಮಗು ಇದೆ. ಸದ್ಯ ಕಲಬುರಗಿ ನಗರದಲ್ಲಿ ರಾಜ್ಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸುರೇಖಾ ಪತಿ ಮಲ್ಲಿನಾಥ ಎರಡು ತಿಂಗಳ ಹಿಂದಷ್ಟೇ ಸಾವನ್ನಪ್ಪಿದ್ದರು. ಇದೀಗ ಸುರೇಖಾ ಕೂಡ ಮೃತಪಟ್ಟಿದ್ದು, ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಮಕ್ಕಳು ಅನಾತವಾಗಿವೆ.

ಯಡ್ರಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಮೃತದೇಹ ಹೊರ ತೆಗೆಯಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.