ಕಲಬುರಗಿ: ಎಲ್ಪಿಜಿ ದರ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ವುಮೆನ್ ಇಂಡಿಯಾ ಮೂಮೆಂಟ್ ನೇತೃತ್ವದಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿ ಪ್ರತಿಭಟಿಸಿದ ಮಹಿಳೆಯರು ‘ಮೋದಿ ರಾಜ್ ಮೇ, ಕಟೋರಾ ಆಯಾ ಹಾತ್ ಮೇ’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾದ ಬಳಿಕ ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆಯಾಗಿದೆ. 2014 ರಲ್ಲಿಯೇ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಲಾಗಿತ್ತು. ಮತ್ತೆ ಈಗ 144 ರೂ. ಬೆಲೆ ಏರಿಕೆ ಮಾಡಿರುವುದು ಬಡವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ ಎಂದು ಆರೋಪಿಸಿದರು.