ಸೇಡಂ(ಕಲಬುರಗಿ): ಇಲ್ಲಿನ ಕೆಸೋರಾಮ್ ಇಂಡಸ್ಟ್ರೀಸ್ನ ವಾಸವದತ್ತ ಸಿಮೆಂಟ್ ಕಾರ್ಖಾನೆಯಲ್ಲಿ ಆಯತಪ್ಪಿ ಪ್ಲಾಂಟ್ ಮೇಲಿಂದ ಬಿದ್ದು ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಒಂದು ತಿಂಗಳೊಳಗೆ ಕಾರ್ಖಾನೆಯಲ್ಲಿ ಸಂಭವಿಸಿದ ಎರಡನೇ ಸಾವು ಇದಾಗಿದೆ.
ಕಾರ್ಖಾನೆಯಲ್ಲಿನ ರಾ ಮಿಲ್ನ ನಾಲ್ಕನೇ ಘಟಕದಲ್ಲಿ ಗುತ್ತಿಗೆದಾರರಡಿ ಕೆಲಸ ಮಾಡುತ್ತಿದ್ದ ಬಾಬಾ ಪಟೇಲ ತಂದೆ ಮಶಾಕ ಪಟೇಲ್ (43) ಎಂಬಾತ ಆಯತಪ್ಪಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಳೆದ ಮೂರು ತಿಂಗಳಲ್ಲಿ ಈ ಸಿಮೆಂಟ್ ಕಾರ್ಖಾನೆಯಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದಂತಾಗಿದೆ.
ಘಟನೆ ಹಿನ್ನೆಲೆಯಲ್ಲಿ ನಿರಂತರ ಸಾವುಗಳಿಗೆ ಕಾರ್ಖಾನೆ ಕಾರಣವಾಗುತ್ತಿದ್ದು, ಸುರಕ್ಷತಾ ದೋಷ ಎದ್ದು ಕಾಣುತ್ತಿದೆ ಎಂದು ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕಿಟಕಿ ಗಾಜುಗಳು, ಕುರ್ಚಿ ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಾರ್ಖಾನೆಯಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಅಲ್ಲದೆ, ಮೃತನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಇಬ್ಬರಿಗೆ ನೌಕರಿ ನೀಡುವಂತೆ ಒತ್ತಾಯಿಸಿ ರಾಜ್ಯ ಹಾಪ್ಕಾಮ್ಸ್ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಭಾರತೀಯ ಮಜ್ದೂರ ಸಂಘದ ಅಧ್ಯಕ್ಷ ಅನೀಲಕುಮಾರ ಪಾಟೀಲ ತೇಲ್ಕೂರ, ಬಿಜೆಪಿ ಮುಖಂಡ ಶಿವಕುಮಾರ ಪಾಟೀಲ ಹಾಗೂ ಕಾರ್ಖಾನೆಯ ಅಧಿಕಾರಿಗಳ ಜೊತೆ ಸಭೆ ನಡೆದಿದೆ. ಆದರೆ ಆಡಳಿತ ಮಂಡಳಿ ಒಪ್ಪದೇ ಇದ್ದಾಗ ಕೆಲಹೊತ್ತು ಮಾತಿನ ಚಕಮಕಿ ಕೂಡ ಆಯಿತು.
ಕಾರ್ಖಾನೆಯಲ್ಲಿ ನವೆಂಬರ್, ಡಿಸೆಂಬರ್ನಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಇದೀಗ ಜನವರಿಯಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮೂರು ತಿಂಗಳಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿರುವುದು ತೀವ್ರ ಆತಂಕ ಮೂಡಿದೆ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ಬಾಲಾಜಿ ಸಾವಿನ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೊರೊನಾ ಹೆಚ್ಚಿದ್ದಾಗ ನಿರ್ಬಂಧ ಸಡಿಲಿಸಿ, ಇಲ್ಲದಿದ್ದಾಗ ಕಠಿಣ ನಿಮಯ ಅಂತಾರೆ.. ಸರ್ಕಾರದ ವಿರುದ್ಧ ರಾಮಲಿಂಗಾರೆಡ್ಡಿ ಟೀಕೆ