ಕಲಬುರಗಿ: ಜಿಲ್ಲಾ ಛಾಯಾಗ್ರಾಹಕರ ಸಂಘದ ನೇತೃತ್ವದಲ್ಲಿ ಕಲಬುರಗಿಯ ಚೇಂಬರ್ ಆಫ್ ಕಾಮರ್ಸ್ ಸಭಾಂಣಗಣದಲ್ಲಿ ವಿಶ್ವ ಛಾಯಾಗ್ರಾಹಕರ ದಿನ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಹಿರಿಯ ಪತ್ರಕರ್ತ ಬಾಬುರಾವ್ ಯಡ್ರಾಮಿ ಚಾಲನೆ ನೀಡಿದರು. ಈ ವೇಳೆ ಏಳು ಜನ ಸಾಧಕ ಹಾಗೂ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಗರದ ವಿವಿಧ ಫೋಟೋ ಸ್ಟುಡಿಯೋಗಳ ವೈವಿಧ್ಯಮಯ ಛಾಯಾಚಿತ್ರಗಳ ಪ್ರದರ್ಶನ ನಡೆಯಿತು.
ಛಾಯಾಗ್ರಹಣ ತರಬೇತುದಾರ ಖಾಜಾ ಪೀರ್, ಛಾಯಾಗ್ರಹಣ ಸಂಘದ ಅಧ್ಯಕ್ಷ ಶರಣಬಸಪ್ಪ ಭೋಸನೂರ್ ಸೇರಿದಂತೆ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.