ಕಲಬುರಗಿ: ಅವಮಾನಕರ ರೀತಿಯಲ್ಲಿದ್ದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ವಾಟ್ಸ್ಯಾಪ್ ಸ್ಟೇಟಸ್ ಇಟ್ಟುಕೊಂಡಿದ್ದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಸುಗೂರು ಗ್ರಾಮದ ಶರಣಪ್ಪ ನಾಯ್ಕೋಡಿ ಬಂಧಿತ ಆರೋಪಿ. ಈತ ಅಂಬೇಡ್ಕರ್ ಅವರಿಗೆ ಅವಮಾನ ಆಗುವ ರೀತಿಯಲ್ಲಿ ಭಾವಚಿತ್ರ ಸೃಷ್ಟಿಸಿ ಅದನ್ನು ತನ್ನ ವಾಟ್ಸ್ಯಾಪ್ ಸ್ಟೇಟಸ್ ಆಗಿ ಇಟ್ಟುಕೊಂಡಿದ್ದನ್ನು ಗಮನಿಸಿದ ದಲಿತ ಮುಖಂಡರು ತಿಳಿಹೇಳಿದರೂ ಸಹ ಅವರ ಮಾತನ್ನು ಕಡೆಗಣಿಸಿದ್ದ ಎಂದು ಆರೋಪಿಸಲಾಗಿದೆ. ಹೀಗಾಗಿ ವಾಡಿ ಪೊಲೀಸ್ ಠಾಣೆಯಲ್ಲಿ ಶರಣಪ್ಪನ ವಿರುದ್ಧ ಪ್ರಕರಣ ದಾಖಲಿಸಿದ್ದರು. ದೂರಿನನ್ವಯ ಪೊಲೀಸರು ಶರಣಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.