ಕಲಬುರಗಿ: ಮಾರಕಾಸ್ತ್ರಗಳಿಂದ ಯುವಕನೋರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯ ಮರಗುತ್ತಿ ಕ್ರಾಸ್ ಎಂ.ಎಂ.ಗಾರ್ಡನ್ ಬಳಿ ನಡೆದಿದೆ.
ಮಾಲಗತ್ತಿ ಗ್ರಾಮದ ನಿವಾಸಿ ಸಚಿನ್ ಅಂಬಲಗಿ (25) ಕೊಲೆಯಾದ ಯುವಕ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವಿಜಯಪುರದಲ್ಲಿ ಚಳಿಯ ತೀವ್ರತೆಗೆ ವೃದ್ಧ ಬಲಿ