ಕಲಬುರಗಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹವೊಂದು ನಗರದ ಹೊರವಲಯದ ಅಫಜಲಪುರ ರಸ್ತೆಯಲ್ಲಿ ಪತ್ತೆಯಾಗಿದೆ. ಮೃತನನ್ನು ಆಶ್ರಯ ಕಾಲೋನಿಯ ಪ್ರವೀಣಕುಮಾರ್ (23) ಎಂದು ಗುರುತಿಸಲಾಗಿದೆ.
ಮೃತ ಪ್ರವೀಣ್ಕುಮಾರ್ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ದುಡಿಯುತ್ತಿದ್ದನು. ಈತನನ್ನು ಸ್ನೇಹಿತರಾದ ಸಾಗರ್ ಮತ್ತು ಆತನ ಸಂಗಡಿಗರು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಯಾದಗಿರಿ: ಸಿಡಿಲು ಬಡಿದು ಮೃತಪಟ್ಟವರ ಕುಟುಂಬಕ್ಕೆ ₹ 15 ಲಕ್ಷ ಪರಿಹಾರ ವಿತರಣೆ