ಮಡಿಕೇರಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ 25 ಮಂದಿ ವಿದ್ಯಾರ್ಥಿಗಳಲ್ಲಿ ಏಕಕಾಲಕ್ಕೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕೊಡಗು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.
ಮಡಿಕೇರಿಯಿಂದ ಸುಮಾರು 20 ಕಿಲೋ ಮೀಟರ್ ದೂರವಿರುವ ಗನಗಂದೂರ್ ಎಂಬಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ 25 ಮಂದಿ ಪಿಯುಸಿ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಇದನ್ನೂ ಓದಿ:'ಹಿಂಸಾಚಾರ ಸಂಬಂಧ ಇಲ್ಲಿಯವರೆಗೆ 25 ಕೇಸು ದಾಖಲು; ಯಾವುದೇ ಆರೋಪಿಯನ್ನು ಬಿಡಲ್ಲ'
ಶಾಲಾ ಆಡಳಿತ ಮಂಡಳಿ ವೈದ್ಯರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜನವರಿ 23ರಂದು ಸುಮಾರು 38 ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಬುಧವಾರ ಸೋಂಕು ಪರೀಕ್ಷೆಯ ವರದಿ ಬಹಿರಂಗವಾಗಿದ್ದು, 25 ಮಂದಿಗೆ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ.
ಶಾಲಾ ಪ್ರಾಧಿಕಾರ ನೀಡಿದ ಮಾಹಿತಿಯಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕರು ಸೇರಿದಂತೆ 22 ಮಂದಿಯನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾಡಳಿತದಿಂದ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.