ಕೊಡಗು : ಕೊಡಗಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿವೆ. ಮೊದಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ತಂಗುವ ರೆಸಾರ್ಟ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಈಗ ಕಟ್ಟಡದ ಕೆಲಸ ಮಾಡುವ ಕಾರ್ಮಿಕರಿಗೆ ಸೋಂಕು ಹರಡಿದೆ.
ಕೂಲಿ ಕೆಲಸಕ್ಕೆ ಮಡಿಕೇರಿಗೆ ಜಾರ್ಖಂಡ್ನಿಂದ ಬಂದಿದ್ದ 29 ಕಟ್ಟಡ ಕಾರ್ಮಿಕರಿಗೆ ಕೊರೊನಾ ಸೋಂಕು ತಗುಲಿದೆ. ಕೆಲಸ ಮಾಡುತ್ತಿದ್ದ ಕಟ್ಟಡವನ್ನು ಲಾಕ್ ಮಾಡಿ ಕಾರ್ಮಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿಯಲ್ಲಿ ರಾಜಸೀಟು ಪ್ರವಾಸಿತಾಣದ ಪಕ್ಕದಲ್ಲಿ ಕಟ್ಟಡ ಕೆಲಸಕ್ಕೆ ಬಂದಿದ್ದ 29 ಕೂಲಿ ಕೆಲಸಗಾರರಲ್ಲಿ ಸೋಂಕು ಕಾಣಿಸಿದೆ. ಜೊತೆಗೆ ಕೆಲಸ ಮಾಡುತ್ತಿದ್ದ ಎಲ್ಲರನ್ನು ತಪಾಸಣೆಗೊಳಪಡಿಸಲಾಗಿದೆ.
ಜಿಲ್ಲಾ ವೈದ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು, ಕಟ್ಟಡವನ್ನು ಸೀಲ್ ಮಾಡಲಾಗಿದೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಮತ್ತು ಕೂಲಿ ಕೆಲಸಕ್ಕೆ ಬರುವ ಕೂಲಿ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಗಡಿ ಚೆಕ್ ಪೋಸ್ಟ್ ಕುಟ್ಟಕರಿಕೆ, ಮಾಕೂಟ್ಟ ಭಾಗದಲ್ಲಿ ದಿನದ 24 ಗಂಟೆಯೂ ತಪಾಸಣೆ ನಡೆಸಲಾಗುತ್ತಿದೆ.