ಮಡಿಕೇರಿ: ಮಂಗಳೂರು ಮುಖ್ಯರಸ್ತೆ ರಾಷ್ಟ್ರೀಯ ಹೆದ್ದಾರಿ 275 ರ ಬಳಿ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಣ್ಣು ಜರಿಯುತ್ತಿದೆ. ಹೀಗಾಗಿ ಮಡಿಕೇರಿ-ಮಂಗಳೂರು ರಸ್ತೆ ಸಂಚಾರವನ್ನು ಮಂಗಳವಾರ ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ರವರೆಗೆ ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಸ್ಥಳಕ್ಕೆ ಶಾಸಕ ಬೋಪಯ್ಯ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ನಿರಂತರವಾಗಿ ಸುರಿಯುತ್ತಿರೋ ಮಳೆ: ನೀರಿನ ಮಟ್ಟ ಹೆಚ್ಚಳ, ಕೊಡಗುದಲ್ಲಿ ಜನ ಜೀವನ ಅಸ್ತವ್ಯಸ್ತ