ಕೊಡಗು: ಗುಂಡು ಹಾರಿಸಿಕೊಂಡು ಕಾಫಿ ಬೆಳೆಗಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಬಿ.ಅಪ್ಪಣ್ಣ (58) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ಈತ ತಮ್ಮ ತೋಟದಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.