ಕೊಡಗು: ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ ಗ್ರಾಮ ಪಂಚಾಯಿತಿ ಸದಸ್ಯೆ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ರಸುಲ್ ಪುರದ ಬಳಿ ನಡೆದಿದೆ.
ಸೋಮವಾರಪೇಟೆ ತಾಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸದಸ್ಯೆ ಹೇಮಾವತಿ ಹಲ್ಲೆಗೊಳಗಾದ ಮಹಿಳೆ. ರಸುಲ್ಪುರದಲ್ಲಿ ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ ಇಬ್ಬರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಸಿ.ಕೆ.ಗಣೇಶ್ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಇನ್ನು ಗಾಯಗೊಂಡಿರುವ ಸದಸ್ಯೆ ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.