ಕೊಡಗು: ಸಾಲಭಾದೆ ತಾಳಲಾರದೆ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟಗೇರಿ ಗ್ರಾಮದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬೀನಾ ಬೊಳ್ಳಮ್ಮರ ಪತಿ ಅಲ್ಲಾರಂಡ ರಾಜು (59) ಮೃತ ದುರ್ದೈವಿ.
ರಾಜು, ವಿವಿಧ ಬ್ಯಾಂಕ್ಗಳಲ್ಲಿ ಸುಮಾರು 15 ಲಕ್ಷ ರೂಗಳಷ್ಟು ವಾಹನ ಹಾಗೂ ಕೈ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.