ಕೊಡಗು: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಮಡಿಕೇರಿಯ ಗಣಪತಿ ಬೀದಿಯ 53 ವರ್ಷದ ಪುರುಷ ಇಂದು ಸಾವನ್ನಪ್ಪಿದ್ದಾರೆ. ಇವರು ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆಗಸ್ಟ್ 24ರಂದು ಕೋವಿಡ್ ಪರೀಕ್ಷೆ ನಡೆಸಿದ್ದ ಸಂದರ್ಭದಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಆಗಸ್ಟ್ 25ರಂದು ಇವರನ್ನು ಜಿಲ್ಲಾ ಕೊವೀಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಇನ್ನು ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತ ಅಂತ್ಯಕ್ರಿಯೆ ನೆರವೇರಿಸಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.