ಸೋಮವಾರಪೇಟೆ (ಕೊಡಗು): ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಜಗಳದಲ್ಲಿ ವ್ಯಕ್ತಿವೋರ್ವ ತನ್ನ ಸೊಸೆ ಮೇಲೆಯೇ ಗುಂಡು ಹಾರಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೆಟ್ಟದಕೊಪ್ಪದಲ್ಲಿ ಆಸ್ತಿ ಸಂಬಂಧ ಮಾವ ಮತ್ತು ಸೊಸೆ ನಡುವೆ ಜಗಳವಾಗಿದೆ. ಈ ವೇಳೆ ಮಾವ ಅಯ್ಯಪ್ಪ ತನ್ನ ಸೊಸೆ ತೀರ್ಥ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಸೊಸೆ ತೀರ್ಥ(36) ಅವರ ಎಡಗೈ ಹಾಗೂ ಎದೆ ಭಾಗಕ್ಕೆ ಗುಂಡೇಟು ಬಿದ್ದಿದೆ. ಗುಂಡೇಟಿನಿಂದ ಗಾಯಗೊಂಡಿರುವ ತೀರ್ಥರನ್ನು ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.