ETV Bharat / state

ಮತದಾನದ ಮಹತ್ವವನ್ನು ಸಾರುವ ಮಾದರಿ ಮತಗಟ್ಟೆ.. ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಸಿದ್ಧತೆ - ಟ್ಯಾಬುಲೇಷನ್ ಟೇಬಲ್

ಮಡಿಕೇರಿಯ ಮತಗಟ್ಟೆಯನ್ನು ಮಾದರಿ ಮತಗಟ್ಟೆಯಾಗಿ ವಿನ್ಯಾಸಗೊಳಿಸಲಾಗಿದೆ.

ಮತಗಟ್ಟೆ
ಮತಗಟ್ಟೆ
author img

By

Published : May 9, 2023, 9:20 PM IST

ಮತದಾನದ ಮಹತ್ವವನ್ನು ಸಾರುವ ಮಾದರಿ ಮತಗಟ್ಟೆ

ಮಡಿಕೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆ ನಾಳೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ಸಾರುವ ಉದ್ದೇಶದಿಂದ ಸಾಂಕೇತಿಕವಾಗಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 210 ಹಾಗೂ 211 ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆ, ಹಿಲ್ ರಸ್ತೆ, ಮಡಿಕೇರಿ ಇಲ್ಲಿನ ಮತಗಟ್ಟೆಯನ್ನು ಮಾದರಿ ಮತಗಟ್ಟೆಯಾಗಿ ವಿನ್ಯಾಸಗೊಳಿಸಲಾಗಿದೆ.

ಮಾದರಿ ಮತಗಟ್ಟೆಯಲ್ಲಿ ಲಭ್ಯವಿರುವ ಸೌಲಭ್ಯಗಳು: ಶಾಲಾ ಕಟ್ಟಡವನ್ನು ಕೊಡಗಿನ ಕಾಫಿ ಸಂಸ್ಕೃತಿಯನ್ನು ಸಾರುವ ಚಿತ್ರಕಲೆ ಮೂಲಕ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ವಿಶೇಷಚೇತನರಿಗಾಗಿ ರೈಲಿಂಗ್ಸ್, ವ್ಹೀಲ್‍ಚೇರ್ ಹಾಗೂ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ರಿಯಾಯಿತಿ ದರದಲ್ಲಿ ಮತದಾರರಿಗೆ ಕುಡಿಯಲು ಕಾಫಿ ವ್ಯವಸ್ಥೆ ಮಾಡಲಾಗಿದೆ. (ರೂ.10 ಕ್ಕೆ ಫಿಲ್ಟರ್ ಕಾಫಿಯನ್ನು ನಿರೀಕ್ಷಣಾ ಕೊಠಡಿಯಲ್ಲಿ ಕುಳಿತು ಸವಿಯಬಹುದಾಗಿದೆ). ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಕಲ್ಪಿಸಲಾಗಿದೆ. ಪೀಠೋಪಕರಣಗಳು, ಫ್ಯಾನ್, ಬೆಳಕಿನ ವ್ಯವಸ್ಥೆಗಳನ್ನೊಳಗೊಂಡಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ.

ವೈಟಿಂಗ್ ರೂಮ್ ಸೌಲಭ್ಯದೊಂದಿಗೆ ವ್ಯವಸ್ಥಿತ ರೀತಿಯಲ್ಲಿ ಮತದಾನ ಮಾಡಲು ಟೋಕನ್ ಸೌಲಭ್ಯ ಕಲ್ಪಿಸಲಾಗಿದೆ. ವಿಶೇಷಚೇತನರು ಹಾಗೂ ಹಿರಿಯ ನಾಗರಿಕ ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರ ಸೇವೆಯನ್ನು ಒದಗಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 75 ಮೈಕ್ರೋ ವೀಕ್ಷಕರ ನೇಮಕ ಮಾಡಲಾಗಿದ್ದು, ಮೈಕ್ರೋ ವೀಕ್ಷಕರುಗಳನ್ನು ಕ್ರಿಟಿಕಲ್ ಮತಗಟ್ಟೆಗಳಿಗೆ ಮಾತ್ರ ನಿಯೋಜಿಸಲಾಗುವುದು.

ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಸಿದ್ಧತೆ: ಮಸ್ಟರಿಂಗ್ ದಿನ ಮಸ್ಟರಿಂಗ್ ಕಾರ್ಯವನ್ನು ಸೆಕ್ಟರ್​ವಾರು ಪ್ರತ್ಯೇಕ ಕೊಠಡಿಗಳಲ್ಲಿ ಮಾಡಲಾಗುವುದು. ಒಂದು ಕೊಠಡಿಗೆ ಒಬ್ಬರು ಸೆಕ್ಟರ್ ಅಧಿಕಾರಿ, ಇಬ್ಬರು ಸಿಬ್ಬಂದಿ ಹಾಗೂ ಇಬ್ಬರು ಗ್ರಾಮ ಸಹಾಯಕರನ್ನು ನಿಯೋಜಿಸಲಾಗಿದೆ. ಪ್ರತಿ ಕೊಠಡಿಗಳಿಗೆ ಮತಗಟ್ಟೆವಾರು ಇವಿಎಂಗಳನ್ನು ಹಾಗೂ ಚುನಾವಣಾ ಸಾಮಗ್ರಿಗಳನ್ನು ಸರಬರಾಜು ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಒದಗಿಸಲಾಗುವುದು.

ಡಿ-ಮಸ್ಟರಿಂಗ್ ದಿನ: ಡಿ-ಮಸ್ಟರಿಂಗ್ ಕಾರ್ಯಕ್ಕೆ ಒಟ್ಟು 12 ಟೇಬಲ್‍ಗಳನ್ನು ಮಾಡಲಾಗಿದ್ದು, 1 ಟೇಬಲ್‍ಗೆ 4 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಸಿಬ್ಬಂದಿ ಇವಿಎಂ ಶಾಸನಬದ್ಧ ಹಾಗೂ ಶಾಸನಬದ್ಧವಲ್ಲದ ಲಕೋಟೆಗಳನ್ನು ಪರಿಶೀಲಿಸಿ ಪಡೆಯಲಿದ್ದಾರೆ.

ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ವಿವರ: ಮಸ್ಟರಿಂಗ್ ಕಾರ್ಯವು ಮೇ 09 ಮತ್ತು ಡಿ-ಮಸ್ಟರಿಂಗ್ ಕಾರ್ಯವು ಮೇ 10 ರಂದು ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯವು ನಗರದ ಸಂತ ಜೊಸೇಫರ ಕಾನ್ವೆಂಟ್‍ನಲ್ಲಿ ನಡೆಯಲಿದೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯವು ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನಡೆಯಲಿದೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೇ 10 ರಂದು ಡಿ-ಮಸ್ಟರಿಂಗ್ ಕಾರ್ಯ ಮುಗಿದ ನಂತರ ವಿದ್ಯುನ್ಮಾನ ಮತಯಂತ್ರಗಳು ಹಾಗೂ ಚುನಾವಣಾ ದಾಖಲೆ ಪತ್ರಗಳನ್ನು ಅದೇ ದಿನ ಮಡಿಕೇರಿ ಸಂತ ಜೊಸೇಫರ ಕಾನ್ವೆಂಟ್ ಇಲ್ಲಿ ಇರುವ ಭದ್ರತಾ ಕೊಠಡಿಗೆ ತಂದು ದಾಸ್ತಾನು ಮಾಡಲಾಗುವುದು.

ಭದ್ರತಾ ಕೊಠಡಿ: ಬುಧವಾರ ಮತದಾನ ಮುಕ್ತಾಯಗೊಂಡ ನಂತರ ಡಿ-ಮಸ್ಟರಿಂಗ್ ಕಾರ್ಯವನ್ನು ಸಂಬಂಧಿಸಿದ ಡಿ-ಮಸ್ಟರಿಂಗ್ ಕೇಂದ್ರಗಳಲ್ಲಿ ಮುಗಿಸಿದ ನಂತರ ಎರಡು ಕ್ಷೇತ್ರದ ಮತಯಂತ್ರಗಳನ್ನು ಮತ್ತು ಚುನಾವಣಾ ದಾಖಲೆಗಳನ್ನು ಸಂತ ಜೋಸೆಫರ ಕಾನ್ವೆಂಟ್, ಮಡಿಕೇರಿ ಇಲ್ಲಿ ಕ್ಷೇತ್ರವಾರು ಸಿದ್ದಪಡಿಸಿರುವ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ದಾಸ್ತಾನು ಮಾಡಲಾಗುವುದು.

ಮತಗಳ ಎಣಿಕೆ ಕಾರ್ಯ: ಮೇ 13 ರಂದು ಬೆಳಗ್ಗೆ 8 ರಿಂದ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡು ವಿಧಾನಸಭಾ ಕ್ಷೇತ್ರದ ಎಣಿಕೆ ಕಾರ್ಯ ಸಂತ ಜೊಸೇಫರ ಕಾನ್ವೆಂಟ್, ಮಡಿಕೇರಿ ಇಲ್ಲಿ ಬೇರೆ ಬೇರೆ ಎಣಿಕೆ ಕೇಂದ್ರದಲ್ಲಿ ನಡೆಯಲಿದೆ. ಎಣಿಕೆ ಕೇಂದ್ರದಲ್ಲಿ 14-ಇವಿಎಂ ಎಣಿಕೆ ಟೇಬಲ್, 3-ಇಟಿಪಿಬಿಎಸ್ ಎಣಿಕೆ ಟೇಬಲ್ ಮತ್ತು 4-ಅಂಚೆ ಮತಪತ್ರಗಳ ಎಣಿಕೆ ಟೇಬಲ್​ಗಳನ್ನು ಅಳವಡಿಸಲಾಗಿದೆ. ಈ ಟೇಬಲ್‍ಗಳಿಗೆ ಅಭ್ಯರ್ಥಿಗಳು ಎಣಿಕೆ ಎಜೆಂಟರುಗಳನ್ನು ನೇಮಕ ಮಾಡಲಿದ್ದಾರೆ.

ಈ ಎಣಿಕೆ ಟೇಬಲ್‍ಗಳಲ್ಲದೆ ಎಣಿಕೆ ಕೇಂದ್ರದಲ್ಲಿ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಮತ್ತು ಚುನಾವಣಾ ವೀಕ್ಷಕರ ಟೇಬಲ್ ಹಾಗೂ ಟ್ಯಾಬುಲೇಷನ್ ಟೇಬಲ್ ಇರುತ್ತದೆ. ಅಭ್ಯರ್ಥಿಗಳು ಎಣಿಕೆ ಕೇಂದ್ರದಲ್ಲಿ ಇರುವುದಕ್ಕೆ ಅವಕಾಶವಿದ್ದು, ಅವರಿಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಚುನಾವಣೆ ಮತದಾನ ಮುನ್ನಾದಿನ ಡಿಕೆಶಿ ಟೆಂಪಲ್​ ರನ್; ಆಂಜನೇಯನಿಗೆ ಶರಣೆಂದ ಕನಕಪುರ ಬಂಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.