ಕುಶಾಲನಗರ/ಕೊಡಗು : ಲಾಕ್‘ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಚಾಲಕರ ಸ್ಥಿತಿ ಕಂಡು ದಾನಿಯೊಬ್ಬರು 200 ಆಟೋ ಚಾಲಕರಿಗೆ ಒಂದು ಲಕ್ಷ ರೂಪಾಯಿ ಮೌಲ್ಯದ ಆಹಾರದ ಕಿಟ್ಗಳನ್ನು ವಿತರಣೆ ಮಾಡಿ ಸಹಾಯ ಮಾಡಿದ್ದಾರೆ.
ಜಿಲ್ಲೆಯ ಕುಶಾಲನಗರದ ಉಮಾಶಂಕರ್ ಸ್ವತಃ ಆಟೋ ಚಾಲಕರಾಗಿದ್ದವರು. ಇದೀಗ ಇವರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ. ಕೊರೊನಾದಿಂದ ತಮ್ಮ ಸಹ ಉದ್ಯೋಗಿಗಳಾಗಿದ್ದ ಆಟೋ ಚಾಲಕರು ತೀವ್ರ ಸಮಸ್ಯೆಗೆ ಸಿಲುಕಿದ್ದನ್ನು ಕಂಡು ಒಂದು ಲಕ್ಷ ರೂ. ಮೌಲ್ಯದ ಆಹಾರ ಪದಾರ್ಥಗಳ ಕಿಟ್‌ಗಳನ್ನ ವಿತರಣೆ ಮಾಡಿದರು.
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮೂಲಕ ಆಟೋ ಚಾಲಕರಿಗೆ ಕಿಟ್ ವಿತರಣೆ ಮಾಡಿಸಿದರು. ಕುಶಾಲನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿ, ಪ್ರತೀ ಆಟೋ ಚಾಲಕರಿಗೆ ಸ್ಯಾನಿಟೈಸರ್ ನೀಡಿದರು. ಬಳಿಕ ಸಾಮಾಜಿಕ ಅಂತರ ಕಾಯ್ದುಕೊಂಡೇ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಮಾಶಂಕರ್, ಸಹಾಯ ಮಾಡಿ ಎಂದು ಜನರು ಕೇಳುವುದಿಲ್ಲ. ಆದರೆ, ಇಂತಹ ಸ್ಥಿತಿಯಲ್ಲಿ ಅರ್ಥ ಮಾಡಿಕೊಂಡು ತಮ್ಮ ಮನೆಗಳ ಸುತ್ತ ಮುತ್ತಲಿನ ಬಡವರಿಗೆ ಸಹಾಯ ಮಾಡುವಂತೆ ಮನವಿ ಮಾಡಿದರು.