ಕೊಡಗು: ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಅಫ್ರಿದಿ (23) ಯುವಕ ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ತಿತಿಮತಿ ಸಮೀಪದ ಬದ್ರಗೋಳದಲ್ಲಿ ನಡೆದಿದೆ.
ಮೈಸೂರಿನಿಂದ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಅಫ್ರಿದಿ ಎಂಬ ಯುವಕನಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಕ್ಕೆ ಬಿದ್ದು ತಲೆ,ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಆ ಯುವಕನನ್ನು ಗೋಣಿಕೊಪ್ಪ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತ ಯುವಕ ವಿರಾಜಪೇಟೆ ತಾಲೂಕಿನ ನೆಹರು ನಗರದವನು ಎಂದು ತಿಳಿದುಬಂದಿದೆ. ಈ ಸಂಬಂಧ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.