ವಿರಾಜಪೇಟೆ(ಮಡಿಕೇರಿ): ವೈದ್ಯರ ನಿರ್ಲಕ್ಷ್ಯದಿಂದ ಕೊರೊನಾ ಲಕ್ಷಣವಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ ಎನ್ನುವ ಆರೋಪ ವಿರಾಜಪೇಟೆ ತಾಲೂಕು ಆಸ್ಪತ್ರೆಯ ಸರ್ಜನ್ ವಿರುದ್ಧ ಕೇಳಿ ಬಂದಿವೆ.
ಕೊಡಗು ಜಿಲ್ಲೆ ವಿರಾಜಪೇಟೆ ಪಟ್ಟಣದ ನಿವಾಸಿ ಸೈಯದ್ ಇಸ್ಮಾಯಿಲ್ (46) ವೈದ್ಯರ ನಿರ್ಲಕ್ಷ್ಯದಿಂದ ಸಾವಿಗೀಡಾಗಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಸ್ಮಾಯಿಲ್ ಒಂದು ವಾರದಿಂದ ಜ್ವರದಿಂದ ಬಳಲುತಿದ್ದರು. ಜ್ವರ ಇದ್ದರೂ ಇಲ್ಲಿನ ತಾಲ್ಲೂಕು ಆಸ್ಪತ್ರೆಯ ಸರ್ಜನ್ ಆರೋಗ್ಯ ತಪಾಸಣೆ ಮಾಡದೆ ಬೇಜವಬ್ದಾರಿ ತೋರಿಸಿದ್ದಾರಂತೆ.
ನಿನ್ನೆ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಡಿಕೇರಿಯ ಜಿಲ್ಲಾ ಕೊವೀಡ್ ಆಸ್ಪತ್ರೆಗೆ ಕರೆದುಕೊಂಡು ಬಂದ ಕೇಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ. ನಂತರ ನಡೆಸಿದ ಪರೀಕ್ಷೆಯಲ್ಲಿ ಇವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೊದಲೇ ಕೊವಿಡ್ ಟೆಸ್ಟ್ ನಡೆಸುವಂತೆ ಕೇಳಿದ್ದರೂ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಸೋಕಿನಿಂದಲೇ ಮೃತಪಟ್ಟಿರುವ ಬಗ್ಗೆ ಜಿಲ್ಲಾಡಳಿತ ಅಧಿಕೃತವಾದ ವರದಿ ನೀಡಿಲ್ಲ.