ಕೊಡಗು: ಅನಾರೋಗ್ಯದಿಂದ ಮನನೊಂದ ವೃದ್ಧನೋರ್ವ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆಯ ಮೀನುಪೇಟೆ ಕಾಮಧೇನು ಬಡಾವಣೆಯಲ್ಲಿ ನಡೆದಿದೆ.
ಅಚ್ಚಪಂಡ ತಮ್ಮಯ್ಯ (94) ಎಂಬುವರೆ ಮೃತ ವೃದ್ಧ. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತಮ್ಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲ ದಿನಗಳಿಂದ ಇವರ ಆರೋಗ್ಯ ತೀರ ಹದಗೆಟ್ಟಿತ್ತು ಎನ್ನಲಾಗ್ತಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಸ್ಥಳಕ್ಕೆ ವಿರಾಜಪೇಟೆ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರಾಶಿ ಯಂತ್ರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ಕೂಲಿಕಾರ ಮಹಿಳೆ ಸಾವು, ಇಬ್ಬರಿಗೆ ಗಾಯ