ಕೊಡಗು: ಕೋವಿಡ್-19 ಸಂದರ್ಭದಲ್ಲಿ ಸರ್ಕಾರದ ಜೊತೆ ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸಿದ್ದರೂ ಸರ್ಕಾರ ಮಾತ್ರ ಶ್ರಮಕ್ಕೆ ತಕ್ಕ ಪ್ರತಿಫಲ ಕೊಡುತ್ತಿಲ್ಲ ಎಂದು ಅಗನವಾಡಿ ಶಿಕ್ಷಕಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್ಡೌನ್ ಘೊಷಿಸಿದ ಬಳಿಕ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದೇವೆ. ಈ ವೇಳೆ ಸರ್ಕಾರ ಕೇವಲ ಆಶಾ ಕಾರ್ಯಕರ್ತೆಯರಿಗೆ ಮಾತ್ರ ಪ್ರೋತ್ಸಾಹಧನವನ್ನು ಘೋಷಿಸಿದೆ. ಎಲ್ಲರನ್ನೂ ಸಮನಾಗಿ ಕಾಣದೆ ತಾರತಮ್ಯ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಪ್ರತಿ ಮನೆಗಳಿಗೆ ಭೇಟಿ ನೀಡಿ ಹಿರಿಯ ನಾಗರಿಕರನ್ನು ಗುರುತಿಸಬೇಕು. ಅವರಿಗೆ ಶೀತ, ಕೆಮ್ಮು ಹೀಗೆ ಏನಾದರೂ ಲಕ್ಷಗಳಿವೆಯೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದವರ ಮಾಹಿತಿ ಕಲೆಹಾಕುತ್ತೇವೆ. ನಗರದಲ್ಲಿ ಗುಂಪು-ಗುಂಪಾಗಿ ನಿಲ್ಲದಂತೆ ತಿಳಿಹೇಳುತ್ತಿದ್ದೇವೆ. ಸ್ಯಾನಿಟೈಸರ್ ಬಳಸಿ, ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಬೆಳಗ್ಗೆಯಿಂದ ಸಂಜೆಯವರೆಗೆ ಜನರಿಗೆ ಅರಿವು ಮೂಡಿಸುತ್ತಿದ್ದೇವೆ. ಗ್ರಾಮಾಭಿವೃದ್ಧಿ ಅಧಿಕಾರಿಯ ಸಲಹೆ ಮೇರೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲರನ್ನೂ ಒಳಗೊಂಡಂತೆ ಸಮಗ್ರ ಪ್ಯಾಕೇಜ್ ಘೊಷಿಸಬೇಕು ಎಂದು ಒತ್ತಾಯಿಸಿದ್ದಾರೆ.