ಸೋಮವಾರಪೇಟೆ (ಕೊಡಗು): ಏಳನೇ ತರಗತಿಯ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಅಧ್ಯಾಯ ತೆಗೆದು ಹಾಕಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಶಾಸಕ ಅಪ್ಪಚ್ಚು ರಂಜನ್ ಶ್ಲಾಘಿಸಿದ್ದಾರೆ.
ಟಿಪ್ಪು ಸುಲ್ತಾನ್ ಎನ್ನುವ ಹೆಸರೇ ಕೊಡಗಿಗೆ ಅಪಮಾನ. ಆತ ಏನನ್ನೂ ಮಾಡದಿದ್ದರೂ ಪಠ್ಯದಲ್ಲಿ ಆತನ ವಿಷಯವನ್ನಿಟ್ಟು ಐತಿಹಾಸಿಕವಾಗಿ ವಿಜೃಂಭಿಸುವ ಕೆಲಸ ಮಾಡಲಾಗಿತ್ತು. ಆತ ಮಾಡಿರುವುದು ಎಲ್ಲವೂ ಅನ್ಯಾಯದ ಕೆಲಸಗಳು ಎಂದು ಅವರು ಹೇಳಿದರು.
ದೇಶ ವಿರೋಧಿಯ ವಿಚಾರಗಳನ್ನು ಪಠ್ಯದಿಂದ ತೆಗೆದುಹಾಕುವಂತೆ ನಾವು ಸರ್ಕಾರಕ್ಕೆ ಮನವಿ ಮಾಡಿದ್ದೆವು. ಅದರಂತೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಅಪ್ಪಚ್ಚು ರಂಜನ್ ತಿಳಿಸಿದರು.