ಕೊಡಗು: ಹೋಂಸ್ಟೇನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ಕುಶಾಲನಗರದ ರಾಜೇಶ್ ಮತ್ತು ಮದಲಾಪುರದ ರಜನಿಕಾಂತ್ ಬಂಧಿತರು. ಇವರು ಕುಶಾಲನಗರದ ಹೋಂಸ್ಟೇವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗ್ತಿದೆ. ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಸಿಪಿಐ ಮಹೇಶ್ ದೇವರು ನೇತೃತ್ವದ ತಂಡ ಗಂಧದ ಕೋಠಿಯಲ್ಲಿರುವ ಹೋಂಸ್ಟೇ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅಲ್ಲದೆ ದಂಧೆಗೆ ಬಳಸಿಕೊಂಡಿದ್ದ ಮೈಸೂರು ಹಾಗೂ ಮಂಡ್ಯ ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಹೊರ ಜಿಲ್ಲೆಗಳಿಂದ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.