ಮಡಿಕೇರಿ(ಕೊಡಗು): ಲಾಕ್‍ಡೌನ್ ಉಲ್ಲಂಘಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ವಾಲಿಬಾಲ್ ಆಡುತ್ತಿದ್ದ ಪುಂಡರು ಪೊಲೀಸ್ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ತಾಲೂಕಿನ ಹುಂಡಿಯಲ್ಲಿ ಈ ಘಟನೆ ನಡೆದಿದ್ದು, ನಾಸೀರ್, ಎಜಾಜ್, ಸಿನೋನ್, ಸುನೈನ್ ಮತ್ತು ಸಾಕಿತ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಿದ್ದಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿ ಆಗಿದ್ದಾರೆ.
ಘಟನೆ ಹಿನ್ನೆಲೆ
ನಿನ್ನೆ ಲಾಕ್‍ಡೌನ್ ಉಲ್ಲಂಘಿಸಿ ವಾಲಿಬಾಲ್ ಆಡುತ್ತಿದ್ದ ಯುವಕರಿಗೆ ಬುದ್ಧಿ ಹೇಳಿದ್ದಕ್ಕೆ ಅವರು ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲ್ದಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪ್ರಕರಣ ದಾಖಲಾಗಿದೆ.