ವಿರಾಜಪೇಟೆ (ಕೊಡಗು): ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ ಘಟನೆ ತಾಲೂಕಿನ ಐಮಂಗಲ ಗ್ರಾಮದ ಬಳಿ ನಡೆದಿದೆ.
ಐಮಂಗಲ ಸಮೀಪ ದ್ವಿಚಕ್ರ ವಾಹನ ತಡೆದು ತಪಾಸಣೆ ನಡೆಸಿದಾಗ ಎರಡು ಚಿರತೆ ಚರ್ಮಗಳು ಪತ್ತೆಯಾಗಿವೆ. ಈ ಸಂಬಂಧ ಸುಂಟಿಕೊಪ್ಪದ ಆರೋಪಿ ಮಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ರಷೀದ್ ತಲೆಮರೆಸಿಕೊಂಡಿದ್ದಾನೆ.
ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಾಪತ್ತೆಯಾದವರ ಪತ್ತೆಗೆ ಬಲೆ ಬೀಸಲಾಗಿದೆ.