ಕೊಡಗು: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಕಾಳು ಮೆಣಸು ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದವರೆಗೆ ವಿಶೇಷ ಜಾಥಾ ನಡೆಯತು.
ಜಾಥದಲ್ಲಿ ಜಿಲ್ಲೆಯ ವಾಣಿಜ್ಯ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸುವುದು, ಕನಿಷ್ಠ10 ಎಕರೆ ಕಾಫಿತೋಟ ಹೊಂದಿದವರಿಗೆ ಉಚಿತವಾಗಿ 10 ಹೆಚ್.ಪಿ ಸಾಮರ್ಥ್ಯದ ಮೋಟಾರ್ ಅಳವಡಿಸಲು ಅನುಮತಿ ಕೊಡುವುದು ಸೇರಿದಂತೆ ಸಂಕಷ್ಟದಲ್ಲಿರುವ ರೈತರನ್ನು ಉಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಿದರು.