ಕೊಡಗು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರ್ ರಾಜ್ಯ ಹೆದ್ದಾರಿ 89ರ ಪೂಕಳತೋಡು ಬಳಿ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕೇರಳ ಮೂಲದ ಟಾಟಾ ನೆಕ್ಸಾನ್ ಕಾರು ಪಲ್ಟಿಯಾಗಿದ್ದು, ಎದುರಿಗೆ ಬಸ್ ಬಂದ ಹಿನ್ನೆಲೆ ಅಪಘಾತ ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನು ಈ ಸಂಬಂಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.