ETV Bharat / state

ಮಡಿಕೇರಿಯಲ್ಲಿ ಕಾರು ಪಲ್ಟಿ- ಪ್ರಾಣಾಪಾಯದಿಂದ ಪಾರಾದ 8 ಪ್ರವಾಸಿಗರು - ಕಾಲು ಕಳೆದುಕೊಂಡ ಧೀರಜ್​​​

ಮಡಿಕೇರಿಯ ನಿಸರ್ಗಧಾಮ ವೀಕ್ಷಣೆಗೆಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಿಂದ ಇನ್ನೋವಾ ಕಾರಿನಲ್ಲಿ ಬರುತ್ತಿದ್ದ 8 ಮಂದಿ ಪ್ರವಾಸಿಗರಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಅಂಗಳದಲ್ಲಿ ಪಲ್ಟಿಯಾಗಿದೆ.

car accident
ಮನೆಯ ಅಂಗಳದಲ್ಲಿ ಪಲ್ಟಿಯಾದ ಕಾರು
author img

By

Published : Jun 26, 2023, 8:58 AM IST

ಕೊಡಗು : ಮಡಿಕೇರಿ ತಾಲೂಕಿನ ಬೋಯಿಕೇರಿ ಸಮೀಪದ ಸಿಂಕೋನ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟೊಯೊಟಾ ಇನ್ನೋವಾ ಕಾರೊಂದು ಮನೆಯ ಅಂಗಳದಲ್ಲಿ ಪಲ್ಟಿಯಾಗಿದ್ದು, ಡ್ರೈವರ್​ ಸೇರಿದಂತೆ ಒಟ್ಟು ಎಂಟು ಮಂದಿ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಒಟ್ಟು 8 ಮಂದಿ ನಿಸರ್ಗಧಾಮ ವೀಕ್ಷಣೆಗೆ ಎಂದು ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗ ಸಿಂಕೋನ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಪರಿಣಾಮ ಹೆದ್ದಾರಿ ಬದಿಯಲ್ಲಿರುವ ಮನೆಯ ಅಂಗಳದಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾರಿಗೂ ಹೆಚ್ಚಿನ ಗಾಯಗಳಾಗಿಲ್ಲ.

2 ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ : ಒಡಿಶಾದ ಗಂಜಾಂನಲ್ಲಿ ನಿನ್ನೆ ತಡರಾತ್ರಿ ಒಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸುಮಾರು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬಸ್‌ಗಳು ನಜ್ಜುಗುಜ್ಜಾಗಿವೆ.

ರಾಯಗಢ ಜಿಲ್ಲೆಯ ಗುಡಾರಿ ಪ್ರದೇಶದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಬೆರ್ಹಾಮ್‌ಪುರ ಪ್ರದೇಶದ ಖಂಡೇಲಿ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದಾಗ ಬಸ್​ ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಬ್ರಹ್ಮಪುರದ ಎಂಕೆಸಿಜೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲಾ ಖಾಸಗಿ ಬಸ್​ನ ಪ್ರಯಾಣಿಕರಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಎರಡು ಬಸ್​ಗಳ ನಡುವೆ ಭೀಕರ ಅಪಘಾತ: 10 ಪ್ರಯಾಣಿಕರ ಸಾವು, 6 ಜನರಿಗೆ ಗಂಭೀರ ಗಾಯ

ಕಾಲು ಕಳೆದುಕೊಂಡ ಧೀರಜ್​​​ : ಇನ್ನು ಕನ್ನಡ ಚಿತ್ರರಂಗದ ವರನಟ ದಿ. ಡಾ.ರಾಜ್​​ಕುಮಾರ್ ಅವರ ಪತ್ನಿ ದಿ. ಪಾರ್ವತಮ್ಮ ರಾಜ್​ಕುಮಾರ್ ಅವರ ಸಹೋದರ ಎಸ್.ಎ. ಶ್ರೀನಿವಾಸ್ ಅವರ ಪುತ್ರ ಸೂರಜ್​ ಕುಮಾರ್ (ಧೀರಜ್​​​) ಅವರು ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಚಿಕ್ಕಹುಂಡಿ ಗೇಟ್ ಬಳಿ ಶನಿವಾರ (ಜೂನ್ 24) ದಂದು​ ನಡೆದಿದೆ. ಧೀರಜ್​ಗೆ ಕೇವಲ 35 ವರ್ಷ ವಯಸ್ಸಾಗಿದ್ದು, ಕೆಲ ಸಿನಿಮಾಗಳಲ್ಲಿ ಅಸಿಸ್ಟೆಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ : ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್​​ಕುಮಾರ್ ತಮ್ಮನ ಮಗ

ಇನ್ನೊಂದೆಡೆ, ನಿನ್ನೆ ಹೈದರಾಬಾದ್​ನ ಹನುಮಕೊಂಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಮೇಡಾರಂ ಕಡೆಯಿಂದ ಬರುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿತ್ತು.

ಇದನ್ನೂ ಓದಿ : Road accident: ಕಾರಿಗೆ ಟಿಪ್ಪರ್ ಡಿಕ್ಕಿ.. ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.