ಕೊಡಗು: ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಿದೆ. ಕಾವೇರಿ ಮಾತೆಯು ನಿಗದಿತ ಸಮಯಕ್ಕಿಂತ ತಡವಾಗಿ ತೀರ್ಥ ರೂಪಿಣಿಯಾಗಿ ದರ್ಶನ ನೀಡಿದ್ದಾಳೆ. ಸಂಜೆ 7 ಗಂಟೆ 22 ನಿಮಿಷಕ್ಕೆ ಮೇಷ ಲಗ್ನದಲ್ಲಿ ತೀರ್ಥೋದ್ಭವ ಆಗಿದೆ.
ಈ ಮೂಲಕ ಕಾವೇರಿ ಮಾತೆಯು ಒಂದು ನಿಮಿಷ ತಡವಾಗಿ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥ ರೂಪಿಣಿಯಾದ ಕಾವೇರಿ ಮಾತೆ ದರ್ಶನ ನೀಡಿದಳು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತವೃಂದವು ತೀರ್ಥ ರೂಪಿಣಿಯ ಕಣ್ತುಂಬಿಕೊಂಡರು. ತೀರ್ಥೋದ್ಭವ ಆಗುತ್ತಿದ್ದಂತೆ ಭಕ್ತರಿಗೆ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ತೀರ್ಥೋದ್ಭವ ಕಂಡು ಭಕ್ತಸಾಗರ ಪುಳಕಿತಗೊಂಡಿತು.
ಪ್ರತಿ ವರ್ಷ ಕಾವೇರಿಯು ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ.
ಓದಿ: ನಾಳೆ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ: ಕೊಡಗು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ