ETV Bharat / state

ಡಿಕೆಶಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಡಿಸಿಎಂ ಕಾರಜೋಳ ವಿರುದ್ಧ 'ಕೈ' ಕಾರ್ಯಕರ್ತರ ಪ್ರತಿಭಟನೆ - ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಡಿಸಿಎಂ ಗೋವಿಂದ ಎಂ ಕಾರಜೋಳ ಕೊಡಗಿಗೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
author img

By

Published : Sep 4, 2019, 1:37 AM IST

ಕೊಡಗು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಡಿಸಿಎಂ ಗೋವಿಂದ ಕಾರಜೋಳ ಕೊಡಗಿಗೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದ ಘಟನೆ ಕುಶಾಲನಗರದಲ್ಲಿ ನಡೆದಿದೆ.

ಡಿಸಿಎಂ ಕಾರಜೋಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಉದ್ದೇಶದಿಂದ ಜಿಲ್ಲೆಗೆ ಆಗಮಿಸುತ್ತಿದ್ದ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರು ಕುಶಾಲನಗರದ ಕಾರ್ಯಪ್ಪ ವೃತ್ತದ ಬಳಿ ತಡೆದು ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಷ್ಟರಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಕೆ.ಮಂಜುನಾಥ್, ಮುಖಂಡರಾದ ಚಂದ್ರಕಲಾ ಹಾಗೂ ವಿ.ಪಿ.ಶಶಿಧರ್ ಸೇರಿದಂತೆ ಸುಮಾರು 25 ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧನಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು ಪೊಲೀಸರು ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುತ್ತಿದೆ. ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ವಿರುದ್ಧ ಕೊನೆವರೆಗೂ ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಡಿಕೆಶಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಡಿಸಿಎಂ ಕಾರಜೋಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕೊಡಗು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಡಿಸಿಎಂ ಗೋವಿಂದ ಎಂ ಕಾರಜೋಳ ಅವರು ಕೊಡಗಿಗೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಂದಾದ
ಘಟನೆ ಕುಶಾಲನಗರದಲ್ಲಿ ಸಂಜೆ ನಡೆದಿದೆ.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿ್್ದದ್ದ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರು ಕುಶಾಲನಗರದ ಕಾರ್ಯಪ್ಪ ವೃತ್ತದ ಬಳಿ
ತಡೆದು ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.ಅಷ್ಟರಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಕೆ.ಮಂಜುನಾಥ್ ಮುಖಂಡರಾದ ಚಂದ್ರಕಲಾ ಹಾಗೂ ವಿ.ಪಿ.ಶಶಿಧರ್ ಸೇರಿದಂತೆ ಸುಮಾರು 25 ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಬಂಧನಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು ಪೊಲೀಸರು ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ವಿರುದ್ಧ ಕೊನೆವರೆಗೂ ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.