ETV Bharat / state

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಕೊಡಗಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕೊಡಗಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ
ಕೊಡಗಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ
author img

By

Published : Aug 19, 2022, 10:20 PM IST

Updated : Aug 19, 2022, 10:56 PM IST

ಕೊಡಗು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಸಂಭವಿಸಿದ ಬಳಿಕ ಜಿಲ್ಲೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ಜಗಳ ಬೂದಿ‌ಮುಚ್ಚಿದ ಕೆಂಡದಂತಾಗಿದೆ. ಕಾರಿನ‌ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆಯುವುದಕ್ಕೆ ಪೊಲೀಸ್​ ಇಲಾಖೆ ಕುಮ್ಮಕು ನೀಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಅಲ್ಲದೇ ಜಿಲ್ಲಾ ಎಸ್ಪಿ ಕಚೇರಿ ಎದುರು ಕಾಂಗ್ರೆಸ್​ನ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಕೊಡಗಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಪೊಲೀಸರ ವೈಫಲ್ಯ ಖಂಡಿಸಿ, ಅವರಿಗೆ ಧಿಕ್ಕಾರ ಕೂಗಿ ಎಸ್ಪಿ ವರ್ಗಾವಣೆ ಮಾಡುವಂತೆ ಒತ್ತಾಯ ಮಾಡಿದರು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮುಂದಾಗಬಹುದು ಎಂದು ಕಾಂಗ್ರೆಸ್​ನವರು ಜಿಲ್ಲಾ ಎಸ್ಪಿಗೆ ಮಾಹಿತಿ ನೀಡಿದ್ರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಆದ್ರೆ ಆರೋಪಿಗಳನ್ನು ರಾತ್ರಿಯೇ ಜಾಮೀನನ ಮೇಲೆ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್​ನ ವಿ.ಪಿ.ಶಶಿಧರ್ ದೂರು ನೀಡಿದ್ದು, ರಾತ್ರಿ‌ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜಾಮೀನು ನೀಡಲಾಗಿದೆ.‌

ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಕಾಂಗ್ರೆಸ್ ನಾಯಕರ ಪ್ರತಿಭಟನೆ

Last Updated : Aug 19, 2022, 10:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.