ETV Bharat / state

ಬಿಜೆಪಿ ಶಾಸಕ ಯತ್ನಾಳ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ! - ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಸ್ವಾತಂತ್ರ್ಯ ಹೋರಾಟಗಾರ ಹೆಚ್‌ ಎಸ್‌ ದೊರೆಸ್ವಾಮಿ ಅವರನ್ನು ಶಾಸಕ ಯತ್ನಾಳ್ ಅವಮಾನಿಸಿರುವುದನ್ನು ಖಂಡಿಸಿ ಕೊಡಗಿನಲ್ಲಿ ಕಾಂಗ್ರೆಸ್ ಕಿಸಾನ್ ಘಟಕ ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೀತು.

congress-protest
ಕಾಂಗ್ರೆಸ್ ಪ್ರತಿಭಟನೆ
author img

By

Published : Feb 28, 2020, 7:07 PM IST

ಕೊಡಗು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅವರನ್ನು ಅವಮಾನಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಧೋರಣೆ ಖಂಡಿಸಿ ಕಾಂಗ್ರೆಸ್ ಕಿಸಾನ್ ಘಟಕ ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯ್ತು.

ಬಸನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ನಗರದ ಗಾಂಧಿ ಮೈದಾನದಲ್ಲಿ ಜಮಾಯಿಸಿದ ಪಕ್ಷದ ನೂರಾರು ಪ್ರತಿಭಟನಾನಿರತರು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ಯತ್ನಾಳ್ ಅವಮಾನಿಸಿದ್ದಾರೆ‌. ಅವರನ್ನು ಪಾಕಿಸ್ತಾನದ ಏಜೆಂಟ್ ಅವರೊಬ್ಬ, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಹೀಯಾಳಿಸಿದ್ದಾರೆ‌. ಯತ್ನಾಳ್ ಹೇಳಿಕೆ ಸಮರ್ಥಿಸಿದ ಸಚಿವ ಕೆ ಎಸ್‌ ಈಶ್ವರಪ್ಪಗೂ ಧಿಕ್ಕಾರ, ಡೋಂಗಿ ಸ್ವಾತಂತ್ರ್ಯ ವಿರೋಧಿಗಳಿಗೆ ಧಿಕ್ಕಾರ, ದೇಶವನ್ನು ಅವಮಾನಿಸುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಪ್ರತಿಭಟನಾಕಾರರು ಘೋಷಣೆ ಕೂಗ್ತಾ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಈ ಬಜೆಟ್‌ನಲ್ಲಿ ಕಾಫಿ, ಭತ್ತ, ಕರಿ ಮೆಣಸು ಬೆಳೆಗಾರರನ್ನು ಸಂಪೂರ್ಣ ಕಡೆಗಣಿಸಲಾಗಿದೆ‌. ಕಡಿಮೆ ಬೆಲೆಗೆ ವಿದೇಶದಿಂದ ಕಾಳು ಮೆಣಸು ಆಮದು ಮಾಡಿಕೊಳ್ಳುತ್ತಿದೆ. ಕೃಷಿಕರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸದೆ ದೇಶದ ಅನ್ನದಾತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ನಡೆದ ಗಲಭೆಯಲ್ಲಿ 32 ಜನ ಅಮಾಯಕರು ಮೃತಪಟ್ಟಿದ್ದಾರೆ. ಇದಕ್ಕೆಲ್ಲ ನೈತಿಕ ಹೊಣೆಯನ್ನ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಶಾ ಅವರೇ ಹೊರಬೇಕು ಎಂದು ಪ್ರತಿಭಟಾನಾಕಾರರು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಂಜುನಾಥ್, ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್, ಕೆಪಿಸಿಸಿ ಮುಖಂಡ ಟಿ ಪಿ ರಮೇಶ್ ಮುಂತಾದವರು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.