ETV Bharat / state

ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ: ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ

author img

By

Published : Jul 1, 2022, 9:59 PM IST

ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದ ಕಾರಣ ಕೆಳಭಾಗದ ಜನತೆ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.

continuous-rainfall-in-kodagu-district
ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ: ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ

ಕೊಡಗು: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು‌‌ ಜಿಲ್ಲೆಯ ನದಿ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಪಶ್ಚಿಮ ಘಟ್ಟಗಳ ಸಾಲು, ಬ್ರಹ್ಮಗಿರಿ ಬೆಟ್ಟದ ತಪ್ಪಲು ಪ್ರದೇಶದಲ್ಲೂ ಕೂಡ ಗಾಳಿಸಹಿತ ಭಾರಿ ಮಳೆಯಾಗುತ್ತಿದೆ.

ಬ್ರಹ್ಮಗಿರಿ ಬೆಟ್ಟಗಳ ಸಾಲಿನಲ್ಲೂ ಉತ್ತಮ ಮಳೆಯಾಗುತ್ತಿದ್ದು ಕಾವೇರಿ ನದಿ ನೀರಿನ ಮಟ್ಟ ಕೂಡ ಗಣನೀಯ ಏರಿಕೆ ಕಂಡಿದೆ. ಭಾಗಮಂಡಲ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿದೆ. ಗಾಳಿ ಮಳೆಯ ಜೊತೆಗೆ ಕೊಡಗಿನ ಕೆಲ ಭಾಗದಲ್ಲಿ ಭೂಕಂಪನ ಕೂಡ ಆಗುತ್ತಿರೋದ್ರಿಂದ ಜಿಲ್ಲೆಯ ಜನತೆಯಲ್ಲಿ ಮತ್ತಷ್ಟು ಆತಂಕದ ಛಾಯೆ ಮೂಡಿದೆ.

ಹಾರಂಗಿ ಜಲಾಶಯ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿ ಬಹುತೇಕ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಾದರೂ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಹಾಗೆಯೇ ಈ ವ್ಯಾಪ್ತಿಯಲ್ಲಿ ಮುಂದಿನ ಕೆಲವು ದಿನಗಳು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಜಲಾಶಯದ ಕೆಳಭಾಗದ ಜನತೆ ಎಚ್ಚರಿಕೆಯಿಂದ ಇರುವಂತೆ ಹಾರಂಗಿ ಪುನರ್ವಸತಿ ವಿಭಾಗದ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭೂಕಂಪದ ಹಿನ್ನೆಲೆ ಕೊಡಗಿಗೆ ಭೇಟಿ ಕೊಟ್ಟ ಭೂ ವಿಜ್ಞಾನಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.