ಕೊಡಗು: ಕೊಡಗಿನಲ್ಲಿ ಕೊರೊನಾ ಸ್ಫೋಟವಾಗಿದ್ದು, ಇಂದು 428 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಮೂರನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿದೆ.
ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 33 ವಿದ್ಯಾರ್ಥಿಗಳಿಗೆ ಕೊರೊನಾ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊರೊನಾ ಲಕ್ಷಣ ಇರುವ ಎಲ್ಲಾ ವಿದ್ಯಾರ್ಥಿಗಳಿಗೂಕೂಡ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.
ಇದನ್ನೂ ಓದಿ: ಎಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ಬೇಗ ಮುಗಿಸಿ: ಅಶ್ವತ್ಥನಾರಾಯಣ
ಇಷ್ಟೇ ಅಲ್ಲದೆ ಜಿಲ್ಲೆಯಲ್ಲಿ ಪೊಲೀಸರಿಗೂ ಕೊರೊನಾ ವಕ್ಕರಿಸಿದೆ. 27 ಪೊಲೀಸರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಹಾಗೆ ಕೂಲಿ ಕಾರ್ಮಿಕರು, ಹೋಂ ಸ್ಟೇ, ರೆಸಾರ್ಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಕೊರೊನಾ ವಕ್ಕರಿಸಿದೆ. ಈ ಮೂಲಕ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.