ETV Bharat / state

ಕೊಡಗಿನಲ್ಲಿ ಕೊರೊನಾಗೆ ಮತ್ತೊಂದು ಬಲಿ - Kodagu corona updates

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸೋಂಕಿತ ಮಹಿಳೆಯೋರ್ವರು ಕೊಡಗಿನಲ್ಲಿ ಮೃತಪಟ್ಟಿದ್ದಾರೆ.

Kodagu
Kodagu
author img

By

Published : Jul 30, 2020, 11:23 AM IST

ಕೊಡಗು: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜಿಲ್ಲಾ ಕೊವೀಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಡಿಕೇರಿಯ ಅಜಾದ್ ನಗರದ 54 ವರ್ಷದ ಮಹಿಳೆ ಮೃತಪಟ್ಟಿದ್ದು, ಮೂರು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಿಳೆ ಖಾಸಗಿ ಕ್ಲಿನಿಕ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಮಹಿಳೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.

ಈ ಮೂಲಕ‌ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಾಗುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.