ಕೊಡಗು: ಜಿಲ್ಲೆಯಲ್ಲಿ 3 ಮಕ್ಕಳು ಸೇರಿದಂತೆ ಒಟ್ಟು 14 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪದ 23 ವರ್ಷದ ಯುವತಿ, 50 ವರ್ಷದ ಆರೋಗ್ಯ ಕಾರ್ಯಕರ್ತ, ತಿತಿಮತಿಯ ಆರೋಗ್ಯ ಕೇಂದ್ರದ ವಾಹನ ಚಾಲಕನಿಗೆ ಹಾಗೂ ಕರಿಕೆ ಗ್ರಾಮದ 50 ವರ್ಷದ ವ್ಯಕ್ತಿ ಸೇರಿದಂತೆ ಪೆರಂಬಾಡಿ ಗ್ರಾಮದ ಒಂದೇ ಕುಟುಂಬದ 56 ವರ್ಷದ ವ್ಯಕ್ತಿ, 36 ವರ್ಷದ ಮಹಿಳೆ ಮತ್ತು 12 ವರ್ಷದ ಬಾಲಕಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಂಕಿತ ಆರೋಗ್ಯ ಕಾರ್ಯಕರ್ತೆಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರಿಗೆ ಕೊರೊನಾ ಕಾಣಿಸಿಕೊಂಡಿದೆ. ಮಡಿಕೇರಿಯಲ್ಲೂ ಮೂವರಿಗೆ ಸೋಂಕು ದೃಢಪಟ್ಟಿದ್ದು, 38 ವರ್ಷದ ವ್ಯಕ್ತಿ, 39 ವರ್ಷದ ಮಹಿಳೆ ಮತ್ತು 18 ವರ್ಷದ ಯುವಕನಿಗೆ ಕೊರೊನಾ ಕಾಣಿಸಿಕೊಂಡಿದೆ. ಅಲ್ಲದೆ ಅಶ್ವಿನಿ ಆಸ್ಪತ್ರೆಯಲ್ಲಿ ಇದ್ದ ಬಾಲಕನಿಗೂ ಸಹ ಕೊರೊನಾ ಪಾಸಿಟಿವ್ ವರದಿಯಾಗಿದೆ.
ಸೋಂಕಿತನ ಸಂಪರ್ಕದಲ್ಲಿದ್ದ 11 ವರ್ಷದ ಬಾಲಕ, ಸೋಮವಾರಪೇಟೆ ತಾಲ್ಲೂಕಿನ ಗ್ರಾಮವೊಂದರ ಬಾಲಕ ಮತ್ತು ಶ್ರೀಮಂಗಲದ 34 ವರ್ಷದ ವ್ಯಕ್ತಿ, ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮ, ಕರಿಕೆ ಗ್ರಾಮದ 29 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಜಿಲ್ಲೆಯಲ್ಲಿ ಒಟ್ಟು 92 ಮಂದಿಗೆ ಸೋಂಕು ದೃಢಪಟ್ಟಿದೆ. ಅವರಲ್ಲಿ 10 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.