ETV Bharat / state

ಮುಂಬೈನಿಂದ ಕೊಡಗಿಗೆ ಬಂದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್: ಜಿಲ್ಲಾಧಿಕಾರಿ ಸ್ಪಷ್ಟನೆ - ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಸಾಕಷ್ಟು ಜನರು ಬರುವ ನಿರೀಕ್ಷೆಯಿದೆ. ಕೋವಿಡ್ ಆಸ್ಪತ್ರೆಯಲ್ಲಿ 220 ಬೆಡ್​ಗಳಿದ್ದು, 11 ವೆಂಟಿಲೇಟರ್​ಗಳಿವೆ. ಅವುಗಳ ಮೂಲಕ 120 ಜನರಿಗೆ ಏಕಕಾಲದಲ್ಲಿ ಆಕ್ಸಿಜನ್ ಪೂರೈಸುವ ಸಾಮರ್ಥ್ಯ ಇದೆ. ಪಾಸಿಟಿವ್ ವರದಿಗಳು ಬಂದಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

District Collector Anees Kamani Joy
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
author img

By

Published : May 18, 2020, 6:57 PM IST

ಕೊಡಗು: ಮುಂಬೈನಿಂದ ಬಂದಿದ್ದ 45 ವರ್ಷದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯ ಜನರಿಗೆ ಯಾವುದೇ ಪ್ರಾಥಮಿಕ ಸಂಪರ್ಕ ಇಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದರು.

ನಂತರ ಮಾತನಾಡಿದ ಅವರು, ಮುಂಬೈನಲ್ಲಿ ಹೋಂ ನರ್ಸ್ ಆಗಿದ್ದ ಪಿ-1,224 ಮೇ 14 ರಂದು 14 ಜನರೊಂದಿಗೆ ಬಸ್ಸಿನಲ್ಲಿ ಹೊರಟು ಮೇ 15 ರ ಸಂಜೆ ಮಂಗಳೂರಿಗೆ ಬಂದಿದ್ದರು. ನಂತರ ಖಾಸಗಿ ಕಾರಿನ ಮೂಲಕ ರಾತ್ರಿ 9 ಗಂಟೆಗೆ ಅಲ್ಲಿಂದ ಕೊಡಗಿನ ಚೆಕ್ ಪೋಸ್ಟ್ ಸಂಪಾಜೆಗೆ ಬಂದು, ಅಲ್ಲಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದರು. ನಂತರ ಅವರನ್ನು ನೇರವಾಗಿ ಕೋವಿಡ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಸಾಗಿಸಲಾಗಿತ್ತು. ಇದೀಗ ವರದಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿಕೆ

ಸದ್ಯ ಮಹಿಳೆಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ತಪಾಸಣೆ ನಡೆಸಿದ ಸಿಬ್ಬಂದಿ ಒಬ್ಬರು ಮಾತ್ರ ಮಹಿಳೆಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ. ಉಳಿದಂತೆ ಯಾರೂ ಅವರ ಸಂಪರ್ಕಕ್ಕೆ ಬಂದಿಲ್ಲ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಸಾಕಷ್ಟು ಜನರು ಬರುವ ನಿರೀಕ್ಷೆ ಇದೆ. ಒಂದು ವೇಳೆ ಪಾಸಿಟಿವ್ ವರದಿಗಳು ಬಂದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಕೋವಿಡ್ ಆಸ್ಪತ್ರೆಯಲ್ಲಿ 220 ಬೆಡ್​ಗಳಿದ್ದು, 11 ವೆಂಟಿಲೇಟರ್​ಗಳಿವೆ. ಅವುಗಳ ಮೂಲಕ 120 ಜನರಿಗೆ ಏಕಕಾಲದಲ್ಲಿ ಆಕ್ಸಿಜನ್ ಪೂರೈಸುವ ಸಾಮರ್ಥ್ಯ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.