ETV Bharat / state

ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ದೃಢ: ಜಿಲ್ಲಾಧಿಕಾರಿ ಸ್ಪಷ್ಟನೆ - ಮೈಸೂರಿನ ಮೆಡಿಕಲ್ ಕಾಲೇಜಿನ ವರದಿ

ವಿದೇಶಕ್ಕೆ ತೆರಳಿ ವಾಪಸ್​​ ಆಗಿದ್ದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್​​ ಇದೆ ಎಂದು ಮೈಸೂರಿನ ಮೆಡಿಕಲ್​​ ಕಾಲೇಜಿನ ವರದಿ ಹೇಳುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ತಿಳಿಸಿದ್ದಾರೆ.

Anees K Joy clarify
ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್
author img

By

Published : Mar 19, 2020, 6:21 PM IST

ಕೊಡಗು: ಮೈಸೂರಿನ ಮೆಡಿಕಲ್ ಕಾಲೇಜಿನ ವರದಿ ಪ್ರಕಾರ ವಿದೇಶಕ್ಕೆ ತೆರಳಿ ವಾಪಸ್​ ಆಗಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಸ್ಪಷ್ಟಪಡಿಸಿದ್ದಾರೆ‌.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಬೈನಿಂದ ಕೊಡಗಿಗೆ ಬಂದಿದ್ದ 35 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್‌ನಲ್ಲಿ ವ್ಯಕ್ತಿಗೆ ಚಿಕಿತ್ಸೆ ಮುಂದುವರೆಸಿದ್ದು, ಜನತೆ ಯಾವುದಕ್ಕೂ ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ.

ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್

ಕೊಡಗಿನ ಕೊಂಡಂಗೇರಿ ನಿವಾಸಿ ಕೊರೊನಾ ವೈಸರ್ ಶಂಕಿತ ವ್ಯಕ್ತಿಯ ಗ್ರಾಮದ 5000 ಮೀಟರ್​​​ನನ್ನು ಬಫರ್ ಜೋನ್ ಎಂದು ಘೋಷಿಸಿದ್ದೇವೆ. ಹಾಗೆಯೇ ಗ್ರಾಮದ 306 ಜನರ ಮೇಲೆ ಪೊಲೀಸ್ ಹಾಗೂ ಆರೊಗ್ಯ ಇಲಾಖೆಯಿಂದ ಚೆಕ್‌ಪೋಸ್ಟ್ ನಿರ್ಮಿಸಿ ತೀವ್ರ ನಿಗಾ ವಹಿಸಲಾಗಿದೆ.

ಮಾರ್ಚ್ 31 ರವರೆಗೆ ಗ್ರಾಮದಲ್ಲೇ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುವುದು. ಗ್ರಾಮಸ್ಥರು ಮದುವೆ, ಶುಭ - ಸಮಾರಂಭಗಳಿಗೆ ಹೋಗುವಂತಿಲ್ಲ. ಐಪಿಸಿ ಸೆಕ್ಷನ್ 344 (1) ಕಾನೂನು ವ್ಯಾಪ್ತಿಗೆ ಒಳಪಡುವ ಹೋಟೆಲ್, ರೆಸ್ಟೋರೆಂಟ್ಸ್‌, ಅಂಗಡಿಗಳನ್ನು ತೆರೆಯುವಂತಿಲ್ಲ. ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದೇ 31 ರವರೆಗೆ ಸಂತೆಗಳು, ಮಾರ್ಕೆಟ್ ಹಾಗೂ ಜಾತ್ರೆಗಳನ್ನು ನಡೆಸುವಂತಿಲ್ಲ. ಹಣ್ಣು, ತರಕಾರಿ ಹಾಗೆಯೇ ಮೆಡಿಕಲ್ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ. ಈಗಾಗಲೇ 185 ಕೊರೊನಾ ಶಂಕಿತರನ್ನು ಅವರವರ ಮನೆಯಲ್ಲೇ ತಪಾಸಣೆ ನಡೆಸಲಾಗುತ್ತಿದೆ. ವಿದೇಶದಿಂದ ಜಿಲ್ಲೆಗೆ ಬಂದಿರುವ 5 ಪ್ರವಾಸಿಗರನ್ನು ಅವರು ಉಳಿದಿರುವ ಹೋಂ ಸ್ಟೇ‌ಗಳಲ್ಲೇ ಇರುವಂತೆ ತಿಳಿಸಿದ್ದೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.