ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರೆದಿದ್ದು, ವ್ಯಾಘ್ರನ ದಾಳಿಗೆ ಹಸುವೊಂದು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಬೆಳ್ಳೂರು ಗ್ರಾಮದ ಗೋಪಾಲ್ ಎಂಬುವವರಿಗೆ ಸೇರಿದ ಹಸುವು ಜಮೀನಿನಲ್ಲಿ ಮೇಯುತ್ತಿದ್ದ ವೇಳೆ ಹುಲಿ ಬಾಯಿಗೆ ಸಿಲುಕಿ ಮೃತಪಟ್ಟಿದೆ.
ದಕ್ಷಿಣ ಕೊಡಗು ವಿರಾಜಪೇಟೆ ವ್ಯಾಪ್ತಿಯಲ್ಲಿ ಪದೇ ಪದೆ ಹುಲಿದಾಳಿ ಪ್ರಕರಣಗಳು ನಡೆಯುತ್ತಿರುವುದರಿಂದ ಸ್ಥಳೀಯರು ಆತಂಕದಲ್ಲಿದ್ದಾರೆ. ಅಲ್ಲದೆ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.