ETV Bharat / state

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಎಚ್ಚರಿಕೆ‌

ದಿನದ 24 ಗಂಟೆಗಳು ಹೊರ ಜಿಲ್ಲೆಗಳಿಂದ ಬರುವವರನ್ನು ವೈದ್ಯಕೀಯ ತಪಾಸಣೆಗೆ ಮಾಡಬೇಕಾಗುತ್ತದೆ. ಹೊರ ರಾಜ್ಯ ಅಥವಾ ಜಿಲ್ಲೆಗಳಿಂದ ಆಗಮಿಸುವವರು ಕೊಪ್ಪ, ಕುಶಾಲನಗರ ಹಾಗೂ ಸಂಪಾಜೆ ಚೆಕ್‌ಪೋಸ್ಟ್​ಗಳಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜಿಲ್ಲೆಯಿಂದ ಇದುವರೆಗೆ 779 ಜನರು ಹೊರಗೆ ಹೋಗಿದ್ದಾರೆ ಎಂದು ತಿಳಿಸಿದರು.

author img

By

Published : May 3, 2020, 7:48 PM IST

dc-press-meet
ಜಿಲ್ಲಾಧಿಕಾರಿ ಎಚ್ಚರಿಕೆ‌

ಕೊಡಗು : ಸೋಮವಾರದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅಥವಾ ಕರವಸ್ತ್ರ‌ವನ್ನು ಉಪಯೋಗಿಸಬೇಕು. ಒಂದು ವೇಳೆ ಬಳಸದಿದ್ದರೆ 100 ರೂ. ದಂಡ ವಿಧಿಸಲಾಗುವುದು ಎಂದು ಎಚ್ವರಿಸಿದರು.

ಸಾರ್ವಜನಿಕರ ಕೋರಿಕೆ ಮೇರೆಗೆ ಆಟೋ ಹಾಗೂ ಕಾರುಗಳನ್ನು ವಾರದಲ್ಲಿ 4 ದಿನ ತುರ್ತು ಸೇವೆಗೆ‌ ಬಳಸಬಹುದು. ಜ್ಯುವೆಲರಿ ತೆರೆಯಲು ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸಾರಿಗೆ ಸಂಚಾರಕ್ಕೆ ಅಧಿಕೃತ ಆದೇಶವಿಲ್ಲ. ಹೊರ ರಾಜ್ಯ ಮತ್ತು ಜಿಲ್ಲೆಗಳ ಕಾರ್ಮಿಕರು ಸೇವಾಸಿಂಧು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಆಯಾ ಗ್ರಾಮ ಪಂಚಾಯತ್‌ ಹಾಗೂ ಪಟ್ಟಣ ಪಂಚಾಯತ್‌ ಸಂಪರ್ಕಿಸಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ 3276 ಮಂದಿ ನೊಂದಣಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ವ್ಯವಹಾರಸ್ಥರು ಹಾಗೂ ಕುಟುಂಬದವರು ಸೇರಿದಂತೆ ಸುಮಾರು 3 ರಿಂದ 4 ಸಾವಿರ ಜನ ಆಗಮಿಸುವ ಸಾಧ್ಯತೆಗಳಿವೆ.

ಕಳೆದ 24 ಗಂಟೆಗಳಲ್ಲಿ 368 ಜನ ಹೊರ ರಾಜ್ಯದಿಂದ ಜಿಲ್ಲೆಗೆ ಬರಲು ಅರ್ಜಿ ಸಲ್ಲಿಸಿದ್ದಾರೆ, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಕಾರ್ಮಿಕರು ಸಂಘಟಿತರಾಗಿ ಒಪ್ಪಿಗೆ ನೀಡಿದ್ದರೆ ಬಸ್ ವ್ಯವಸ್ಥೆ ಮಾಡುತ್ತೆವೆ, ಅದರ ವೆಚ್ಚವನ್ನು ಕಾರ್ಮಿಕರೇ ಭರಿಸಬೇಕಾಗುತ್ತದೆ ಎಂದರು.

ದಿನದ 24 ಗಂಟೆಗಳು ಹೊರ ಜಿಲ್ಲೆಗಳಿಂದ ಬರುವವರನ್ನು ವೈದ್ಯಕೀಯ ತಪಾಸಣೆಗೆ ಮಾಡಬೇಕಾಗುತ್ತದೆ. ಹೊರ ರಾಜ್ಯ ಅಥವಾ ಜಿಲ್ಲೆಗಳಿಂದ ಆಗಮಿಸುವವರು ಕೊಪ್ಪ, ಕುಶಾಲನಗರ ಹಾಗೂ ಸಂಪಾಜೆ ಚೆಕ್‌ಪೋಸ್ಟ್​ಗಳಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜಿಲ್ಲೆಯಿಂದ ಇದುವರೆಗೆ 779 ಜನರು ಹೊರಗೆ ಹೋಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಮಾತನಾಡಿ, ಲಾಕ್‌ಡೌನ್ ಆರಂಭವಾದ ದಿನದಿಂದ ಚೆಕ್‌ಪೋಸ್ಟ್‌ಗಳಲ್ಲಿ ಪೋಲಿಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಕೆಲವರು ಅನಗತ್ಯವಾಗಿ ಸಂಚರಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಹೊರತುಪಡಿಸಿ
ವಿನಾಃ ಕಾರಣ ಓಡಾಡಬಾರದು ಎಂದರು.

ಜಿಲ್ಲೆಯಲ್ಲಿ ಸೋಮವಾರದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವುದರಿಂದ ಎಂ‌ಎಸ್‌ಐಎಲ್ ಮದ್ಯ ಮಳಿಗೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.