ಕೊಡಗು : ಕಾಫಿತೋಟದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಕ್ಷಿಣ ಕೊಡಗಿನ ಬಿಟ್ಟಂಗಾಲ ಸಮೀಪದ 2ನೇ ರುದ್ರಗುಪ್ಪೆಯಲ್ಲಿನ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಈ ಹುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಹುಲಿಯೊಂದು ಸಂಚರಿಸುತ್ತಾ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿತ್ತು. 2ನೇ ರುದ್ರಗುಪ್ಪೆಯ ಸಮೀಪವಿರುವ ಕಂಡಂಗಾಲದಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಕಾರ್ಮಿಕರೊಬ್ಬರ ಮೇಲೆ ದಾಳಿ ನಡೆಸಿ ಸ್ಥಳದಲ್ಲೇ ಅವರನ್ನು ದಾರುಣವಾಗಿ ಕೊಂದು ಹಾಕಿತ್ತು.
ಇದಲ್ಲದೆ ಸುತ್ತಮುತ್ತಲಿನ ಜಾನುವಾರುಗಳ ಮೇಲೆಯೂ ನಿರಂತರವಾಗಿ ದಾಳಿ ನಡೆಸುತ್ತಿತ್ತು. ಈ ಭಾಗದಲ್ಲಿ ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಗ್ರಾಮದಲ್ಲಿ ಬೀಡು ಬಿಟ್ಟು, ನಿರಂತರವಾಗಿ ಕಾರ್ಯಾಚರಣೆ ನಡೆಸಿದ್ರೂ, ಹುಲಿ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಈಗ ಹುಲಿ ಅನುಮಾನಾಸ್ಪದವಾಗಿ ಸತ್ತಿದ್ದು, ತೋಟದಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: ಕೊಡಗು : ಜಿಲ್ಲೆಯಲ್ಲಿ 3ನೇ ಬಾರಿ ಕಂಪಿಸಿದ ಭೂಮಿ.. ಬೆಟ್ಟ-ಗುಡ್ಡದಲ್ಲಿ ವಾಸಮಾಡುವ ಜನರಲ್ಲಿ ಆತಂಕ