ETV Bharat / state

ವೈದ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಖಂಡಿಸಿ ಕೊಡಗಿನಲ್ಲಿ ಪ್ರತಿಭಟನೆ

author img

By

Published : Aug 21, 2020, 7:27 PM IST

Updated : Aug 21, 2020, 8:06 PM IST

ಮಡಿಕೇರಿಯಲ್ಲಿರುವ ಡಿಎಚ್ಓ ಕಚೇರಿಗೆ ಆಗಮಿಸಿದ ನೂರಾರು ವೈದ್ಯರು ಕಪ್ಪುಪಟ್ಟಿ ಧರಿಸಿ ನಾಗೇಂದ್ರ ಅವರ ಆತ್ಮಹತ್ಯೆಗೆ ಮೈಸೂರಿನ ಸಿಇಓ ಕಾರಣವೆಂದು ಆರೋಪಿಸಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಡಾ.ನಾಗೇಂದ್ರ ಆತ್ಮಹತ್ಯೆ ಖಂಡಿಸಿ ಕೊಡಗಿನಲ್ಲಿ ವೈದ್ಯರ ಪ್ರತಿಭಟನೆ

ಕೊಡಗು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆಯನ್ನು ಖಂಡಿಸಿ ಕೊಡಗಿನ ವೈದ್ಯರು ಇಂದು ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದರು.

ವೈದ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಖಂಡಿಸಿ ಕೊಡಗಿನಲ್ಲಿ ಪ್ರತಿಭಟನೆ

ಈ ವೇಳೆ ಮಾತನಾಡಿದ ವೈದ್ಯಾಧಿಕಾರಿ ಆನಂದ್, ಕೋವಿಡ್ ಸಂದರ್ಭದಲ್ಲಿ ವೈದ್ಯರು ಎಷ್ಟು ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ನಂಜನಗೂಡಿನ ತಾಲೂಕು ವೈದ್ಯಾಧಿಕಾರಿ ನಾಗೇಂದ್ರ ಅವರಿಗೆ ಅಲ್ಲಿನ ಸಿಇಓ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಸಿಇಓ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ನಮ್ಮ ಸಂಘದ ನಿರ್ದೇಶನದಂತೆ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಪ್ರತಿಭಟನೆಗೂ ಮುನ್ನ ಮೃತ ವೈದ್ಯ ನಾಗೇಂದ್ರ ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು ತುರ್ತುಸೇವೆ ಬಿಟ್ಟು ಉಳಿದ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಿದ್ದರು.‌

Last Updated : Aug 21, 2020, 8:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.