ಕೊಡಗು : ಕೊರೊನಾ ಸೋಂಕಿನ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿ ಜನರಲ್ಲಿ ಆತಂಕ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೊಡಗು ಎಸ್ಪಿ ಡಾ.ಸುಮನ್ ಡಿ ಪೆನ್ನೇಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಬಗ್ಗೆ ಕೆಲ ಮಾಧ್ಯಮಗಳು ವದಂತಿ ಸೃಷ್ಟಿಸುತ್ತಿವೆ. ಇದರಿಂದ ಕೆಲವರಲ್ಲಿ ಆತಂಕ ಮನೆ ಮಾಡಿದಂತೆ ಆಗುತ್ತದೆ ಎಂದು ಸಲಹೆ ನೀಡಿದ್ದಾರೆ. ಕೊರೊನಾಕ್ಕಿಂತಲೂ ಅಪಾಯಕಾರಿ ಸುಳ್ಳು ಸುದ್ದಿ. ಅನುಮಾನದ ಸುದ್ದಿಗಳನ್ನು ಫಾರ್ವರ್ಡ್ ಮಾಡದಿರಿ, ವಾಟ್ಸ್ಆ್ಯಪ್ನಲ್ಲಿ ಬಂದಿದ್ದೆಲ್ಲವೂ ನಿಜವಲ್ಲ. ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಿ, ಸಹಕರಿಸಿ. ಸಂಕಟದ ಸಮಯದಿಂದ ಸಂಯಮ ಕಾಪಾಡಿ ಎಂದಿದ್ದಾರೆ.