ಕೊಡಗು: ಮದ್ಯದ ಮತ್ತಲ್ಲಿ ಮನೆಗೆ ಬೆಂಕಿಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಆರೋಪಿಯ ಪತ್ನಿ ಸಾವನ್ನಪ್ಪಿದ್ದಾರೆ.
ಭಾಗ್ಯ (40) ಮೃತ ದುರ್ದೈವಿ. ಈ ಮೂಲಕ ಪೊನ್ನಂಪೇಟೆ ಸಮೀಪ ಮುಗುಟಗೇರಿ ಗ್ರಾಮದಲ್ಲಿ ನಡೆದ ದುರಂತದಲ್ಲಿ ಈವರೆಗೆ ಒಟ್ಟು 8 ಮಂದಿ ಸಾವನ್ನಪ್ಪಿದಂತಾಗಿದೆ.
ಸುಟ್ಟ ಗಾಯಗಳಿಂದ ನರಳುತ್ತಿದ್ದ ಭಾಗ್ಯ ಅವರನ್ನು ಮೈಸೂರು ಕೆ.ಆರ್.ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಹೆಚ್ಚು ಸುಟ್ಟ ಗಾಯಗಳಾಗಿರುವುದರಿಂದ ಮುಂಜಾನೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಗುಂಡಿನ ಮತ್ತಲ್ಲಿ ದುಷ್ಕೃತ್ಯ: ಕೊಡಗಿನಲ್ಲಿ ಮೂವರ ಸಜೀವ ದಹನ, ಮೂವರು ಆಸ್ಪತ್ರೆಯಲ್ಲಿ ಸಾವು
ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎರವರ ಬೋಜ ಎಂಬಾತ ಮದ್ಯ ಸೇವಿಸಿ ಬಂದು, ಎರವರ ಮಂಜು ಎಂಬುವವರ ಮನೆ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿ ಬೆಂಕಿ ಹಚ್ಚಿದ್ದ. ಈ ವೇಳೆ ಮನೆಯಲ್ಲಿದ್ದ ಎಂಟು ಜನರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಉಳಿದ ಐವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ.